ಮತದಾನ ರಾಷ್ಟ್ರದ ಪ್ರತಿಯೊಬ್ಬ ನಾಗರಿಕನ ಹಕ್ಕು-
ಸಂತೋಷ ಬಂಡೆ
ಇಂಡಿ: ದೇಶದ ಉತ್ತಮ ಸರ್ಕಾರ ಮತ್ತು ಅಭಿವೃದ್ಧಿಗಾಗಿ ಮತದಾನ ಮಾಡುವುದು ನಾಗರಿಕರ ಹಕ್ಕು ಮತ್ತು ಜವಾಬ್ದಾರಿಯಾಗಿದೆ. ದೇಶದ ಪ್ರಗತಿಗೆ ಪ್ರತಿಯೊಬ್ಬ ಪ್ರಜೆಯ ಮತ ಅಗತ್ಯ ಎಂದು ಶಿಕ್ಷಕ ಸಂತೋಷ ಬಂಡೆ ಹೇಳಿದರು.
ಅವರು ತಾಲೂಕಿನ ಹಿರೇರೂಗಿ ಗ್ರಾಮದ ಯುಬಿಎಸ್ ಶಾಲೆಯಲ್ಲಿ ’16 ನೇ ರಾಷ್ಟ್ರೀಯ ಮತದಾರರ ದಿನ’ ನಿಮಿತ್ತ ಹಮ್ಮಿಕೊಂಡ ಕಾರ್ಯಕ್ರಮದಲ್ಲಿ ಪ್ರತಿಜ್ಞಾ ವಿಧಿ ಬೋಧಿಸಿ ಮಾತನಾಡಿದರು.
‘ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರಜೆಗಳೇ ಪ್ರಭುಗಳು.
ಮತದಾನ ರಾಷ್ಟ್ರದ ಪ್ರತಿಯೊಬ್ಬ ನಾಗರಿಕನ ಹಕ್ಕು. ಶಾಲಾ ಕಾಲೇಜು ಹಂತದಲ್ಲೇ ವಿದ್ಯಾರ್ಥಿಗಳಲ್ಲಿ ಮತದಾನದ ಬಗ್ಗೆ ಅರಿವು ಮೂಡಿಸಬೇಕು’ ಎಂದು ಹೇಳಿದರು.
ಮತದಾನವು ಪ್ರಜಾಪ್ರಭುತ್ವದ ಅಡಿಪಾಯವಾಗಿದ್ದು,
ಸಮಾಜದ ಭವಿಷ್ಯ ರೂಪಿಸುವ ಶಕ್ತಿಶಾಲಿ ಸಾಧನವಾಗಿದೆ. ಸಮಾಜದಲ್ಲಿ ಧನಾತ್ಮಕ ಬದಲಾವಣೆ ತರಲು ಮತದಾನವು ಮುಖ್ಯವಾಗಿದೆ ಎಂದು ಹೇಳಿದರು.
ಮುಖ್ಯ ಶಿಕ್ಷಕ ಕೆ ಆಯ್ ಮಕಾನದಾರ ಅಧ್ಯಕ್ಷತೆ ವಹಿಸಿ ಮಾತನಾಡಿ, ಮತದಾನ ರಾಷ್ಟ್ರದ ಪ್ರತಿಯೊಬ್ಬ ನಾಗರಿಕನ ಹಕ್ಕು. ಯುವ ಪೀಳಿಗೆ ತಪ್ಪದೇ ಮತದಾನ ಮಾಡಿ ದೇಶದ ಭವಿಷ್ಯವನ್ನು ನಿರ್ಮಿಸಲು ಕಾರಣಿಭೂತರಾಗಬೇಕೆಂದರು.
ಶಿಕ್ಷಕರಾದ ಎಸ್ ಎಸ್ ಅರಬ, ಎಸ್ ಪಿ ಪೂಜಾರಿ, ಅತಿಥಿ ಶಿಕ್ಷಕಿ ಅಲ್ಫಿಯಾ ಅಂಗಡಿ, ಡಿ ಎಡ್ ಪ್ರಶಿಕ್ಷಣಾರ್ಥಿಗಳಾದ ಮುಸ್ಕಾನ ಮಂಕಣಿ, ಸಾನಿಯಾ ಪಠಾಣ, ಜುಬಿಯಾ ಬಾಗವಾನ ಸೇರಿದಂತೆ ಮಕ್ಕಳು ಭಾಗವಹಿಸಿದ್ದರು.
ಮಕ್ಕಳ ಸರ್ವತೋಮುಖ ಬೆಳವಣಿಗೆಗೆ ಪಾಲಕರ ಸಭೆ ಸಹಕಾರಿ-ಬಸವರಾಜ ಮಾದನಶೆಟ್ಟಿ
16ನೇ ರಾಷ್ಟ್ರೀಯ ಮತದಾರರ ದಿನಾಚಾರಣೆಸಿದ್ಧತೆಗೆ ಅಪರ ಜಿಲ್ಲಾಧಿಕಾರಿ ಡಾ.ಔದ್ರಾಮ ಸೂಚನೆ