ಜ.25ರಂದು ಕೆಇಎ ಮೂಲಕ ನಡೆಯುವ ವಿವಿಧ ಇಲಾಖೆ-ಸಂಸ್ಥೆಯಲ್ಲಿನ ಖಾಲಿ ಹುದ್ದೆಗಳ ನೇಮಕಾತಿಯ ಸ್ಪರ್ಧಾತ್ಮ ಪರೀಕ್ಷೆಯನ್ನು ಸೂಸೂತ್ರವಾಗಿ ನಡೆಸಿ : ಡಾ. ಔದ್ರಾಮ
ವಿಜಯಪುರ, ಜ.23(ಕರ್ನಾಟಕ ವಾರ್ತೆ): ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (ಕೆಇಎ) ಮೂಲಕ ಜನವರಿ 25ರಂದು ಜಿಲ್ಲೆಯ 27 ಪರೀಕ್ಷಾ ಕೆಂದ್ರಗಳಲ್ಲಿ ವಿವಿಧ ಇಲಾಖೆ-ಸಂಸ್ಥೆಗಳಲ್ಲಿನ ಖಾಲಿ ಹುದ್ದೆಗಳ ನೇಮಕಾತಿ ಸ್ಪರ್ಧಾತ್ಮಕ ಪರೀಕ್ಷೆಗಳು ನಡೆಯಲಿರುವುದರಿಂದ ಪರೀಕ್ಷಾ ಕಾರ್ಯಗಳಲ್ಲಿ ಯಾವುದೇ ಲೋಪವಾಗದಂತೆ ಸುಸೂತ್ರವಾಗಿ ನಡೆಸುವಂತೆ ಅಪರ ಜಿಲ್ಲಾಧಿಕಾರಿ ಡಾ. ಔದ್ರಾಮ ಅವರು ಸೂಚಿಸಿದರು.
ಅವರು ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಶುಕ್ರವಾರ ನಡೆದ ವಿವಿಧ ಇಲಾಖೆ-ಸಂಸ್ಥೆಗಳಲ್ಲಿನ ಖಾಲಿ ಹುದ್ದೆಗಳ ನೇಮಕಾತಿ ಸ್ಪರ್ಧಾತ್ಮಕ ಪರೀಕ್ಷೆಯ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಪರೀಕ್ಷೆಯು ಎರಡು ಅವಧಿಯಲ್ಲಿ ನಡೆಯಲಿದ್ದು, ಜಿಲ್ಲೆಯ ಒಟ್ಟು 27 ಪರೀಕ್ಷಾ ಕೇಂದ್ರಗಳಲ್ಲಿ ಜರುಗಲಿದ್ದು,12,688 ಅಭ್ಯರ್ಥಿಗಳು ಪರೀಕ್ಷೆಗೆ ನೋಂದಣಿ ಮಾಡಿಕೊಂಡಿದ್ದಾರೆ. ಯಾವುದೇ ಸಮಸ್ಯೆಬಾರದ ರೀತಿಯಲ್ಲಿ ಪರೀಕ್ಷೆಗೆ ನಿಯೋಜಿತ ಅಧಿಕಾರಿಗಳು ಮುಂಜಾಗ್ರತೆಯಿಂದ ಪರೀಕ್ಷಾ ನಿಯಮಗಳನ್ವಯ ಕಾರ್ಯ ನಿರ್ವಹಿಸುವಂತೆ ಸೂಚನೆ ನೀಡಿದರು. ಪ್ರತಿ ಪರೀಕ್ಷಾ ಕೇಂದ್ರಕ್ಕೆ ಓರ್ವ ವೀಕ್ಷಕರಂತೆ ಒಟ್ಟು 27 ವೀಕ್ಷಕರನ್ನು ನೇಮಿಸಿದೆ.ಪರೀಕ್ಷಾ ಕೇಂದ್ರಕ್ಕೆ ನಿಯೋಜಿಸಲಾದ ವೀಕ್ಷಕರು ಪರೀಕ್ಷೆ ಪ್ರಾರಂಭವಗುವ ಸಮಯಕ್ಕಿಂತ ಒಂದು ಗಂಟೆ ಮೊದಲು ಪರೀಕ್ಷಾ ಕೇಂದ್ರದಲ್ಲಿ ಹಾಜರಿರಬೇಕು.ಪ್ರತಿ ಪರೀಕ್ಷಾ ಕೇಂದ್ರಕ್ಕೆ ಓರ್ವ ಉಪ ಮುಖ್ಯ ಅಧಿಕ್ಷಕರು,ಓರ್ವ ಪ್ರಶ್ನೆಪತ್ರಿಕೆ ಪಾಲಕರು ಹಾಗೂ ಓರ್ವ ವಿಶೇಷ ಸ್ಥಾನಿಕ ಜಾಗೃತದಳ ಸದಸ್ಯರನ್ನು ನೇಮಿಸಿದೆ.ಪರೀಕ್ಷಾ ನಡೆಯುವ ಪರೀಕ್ಷಾ ಕೇಂದ್ರಗಳ ಸುತ್ತಲಿನ 200ಮೀ.ಪ್ರದೇಶವನ್ನು ನಿಷೇಧಿತ ಪ್ರದೇಶ ಎಂದು ಆದೇಶಿಸಲಾಗಿದೆ.ಎಲ್ಲಾ ಪರೀಕ್ಷಾ ಕೇಂದ್ರಗಳಿಗೆ ಮುಂಜಾಗ್ರತಾ ಕ್ರಮವಾಗಿ ಸೂಕ್ತ ಬಂದೋಬಸ್ತ ಕಲ್ಪಿಸಿವ ಕ್ರಮಕ್ಕೆ ಸೂಚಿಸಲಾಯಿತು.
ಈ ಸಂದರ್ಭದಲ್ಲಿ ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಾದ ಚಂದ್ರಶೇಖರ ಹೊಸಮನಿ ಸೇರಿದಂತೆ ಪರೀಕ್ಷೆಗೆ ನಿಯೋಜಿತ ಅಧಿಕಾರಿಗಳು ಉಪಸ್ಥಿತರಿದ್ದರು.