ವಿಜಯಪುರ: ನಗರದ ಪ್ರತಿಷ್ಠಿತ ಬಿ.ಎಲ್.ಡಿ.ಇ. ಡೀಮ್ಡ್ ವಿಶ್ವವಿದ್ಯಾಲಯದ ಶ್ರೀ ಬಿ. ಎಂ. ಪಾಟೀಲ ವೈದ್ಯಕೀಯ ಮಹಾವಿದ್ಯಾಲಯದಲ್ಲಿ ವಾರ್ಷಿಕ ಕ್ರೀಡೋತ್ಸವ–ಜೆನಿತ್ 2026 ಗುರುವಾರ ನಡೆಯಿತು.
2025–26ನೇ ಶೈಕ್ಷಣಿಕ ವರ್ಷದ ಅವಧಿಯಲ್ಲಿ ಆಯೋಜಿಸಲಾದ ನಾನಾ ಕ್ರೀಡಾ ಚಟುವಟಿಕೆಗಳ ಸಮಾರೋಪವಾದ
ಈ ಕಾರ್ಯಕ್ರಮವನ್ನು ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಯೋಗ ಅಧ್ಯಯನ ಕೇಂದ್ರದ ಅಧ್ಯಕ್ಷ ಡಾ. ರಾಜಕುಮಾರ ಪಿ. ಮಾಲಿಪಾಟೀಲ ಉದ್ಘಾಟಿಸಿದರು.
ಬಳಿಕ ಮಾತನಾಡಿದ ಅವರು, ಜೀವನದಲ್ಲಿ ಶಿಸ್ತು ಮತ್ತು ಯೋಗ ಮೂಲಕ ಸದೃಢ ಆರೋಗ್ಯ ಹೊಂದಬೇಕು ಎಂದು ಹೇಳಿದರು.
ಈ ಸಂದರ್ಭದಲ್ಲಿ ಡೀಮ್ಡ್ ವಿವಿ ಸಮಕುಲಾಧಿಪತಿ ಡಾ. ವೈ. ಎಂ. ಜಯರಾಜ, ಕುಲಪತಿ ಡಾ. ಅರುಣ ಇನಾಮದಾರ, ಕುಲಸಚಿವ ಡಾ. ಆರ್. ವಿ. ಕುಲಕರ್ಣಿ, ವೈದ್ಯಕೀಯ ಮಹಾವಿದ್ಯಾಲಯದ ಪ್ರಾಚಾರ್ಯೆ ಡಾ. ತೇಜಸ್ವಿನಿ ವಲ್ಲಭ, ದೈಹಿಕ ಶಿಕ್ಷಣ ನಿರ್ದೇಶಕ ಎಸ್. ಎಸ್. ಕೋರಿ, ವಿದ್ಯಾರ್ಥಿ ಪ್ರತಿನಿಧಿಗಳಾದ ಭಾವನಾ ಸುಂಕಾರ ಹಾಗೂ ಶಶಾಂಕ್ ಜಿ. ಆರ್. ಸೇರಿದಂತೆ ನಾನಾ ಪ್ರಾಧ್ಯಾಪಕರು, ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ವಿದ್ಯಾರ್ಥಿ ಕಲ್ಯಾಣ ಮತ್ತು ಕ್ರೀಡೆ ಸಮಿತಿ ಡೀನ್ ಡಾ. ಗಿರೀಶ ಕುಲ್ಲೊಳ್ಳಿ ಸ್ವಾಗತಿಸಿದರು. ಕ್ರೀಡಾ ವಿಭಾಗದ ಸಹಾಯಕ ನಿರ್ದೇಶಕಿ ಡಾ. ಮಹಾದೇವಿ ವಾಲಿ ವಾರ್ಷಿಕ ಕ್ರೀಡಾ ವರದಿ ವಾಚಿಸಿದರು.
800ಕ್ಕೂ ಹೆಚ್ಚು ವಿದ್ಯಾರ್ಥಿಗಳು ಮತ್ತು ಸಿಬ್ಬಂದಿ ಭಾಗವಹಿಸಿದ ಈ ಕ್ರೀಡೋತ್ಸವದಲ್ಲಿ ನಾನಾ ವಿಭಾಗಗಳಲ್ಲಿ ಸಾಧನೆ ಮಾಡಿದವರಿಗೆ ಬಹುಮಾನ ವಿತರಿಸಲಾಯಿತು.
ಫುಟ್ಬಾಲ್, ಕಬಡ್ಡಿ, ವಾಲಿಬಾಲ್, ಕ್ರಿಕೆಟ್ ಸೇರಿದಂತೆ ಹೊರಾಂಗಣ ಕ್ರೀಡೆಗಳು ಹಾಗೂ ಚದುರಂಗ, ಬ್ಯಾಡ್ಮಿಂಟನ್, ಟೇಬಲ್ ಟೆನಿಸ್, ಈಜು ಮುಂತಾದ ಒಳಾಂಗಣ ಸ್ಪರ್ಧೆಗಳು ನಡೆದವು. ಬೋಧಕ ಹಾಗೂ ಬೋಧಕರ ಹೊರತಾದ ಸಿಬ್ಬಂದಿಗಾಗಿ ವಿಶೇಷ ಸ್ಪರ್ಧೆಗಳನ್ನೂ ಆಯೋಜಿಸಲಾಗಿತ್ತು.
ವಿಜಯಪುರ ನಗರದ ಪ್ರತಿಷ್ಠಿತ ಬಿ.ಎಲ್.ಡಿ.ಇ. ಡೀಮ್ಡ್ ವಿಶ್ವವಿದ್ಯಾಲಯದ ಶ್ರೀ ಬಿ. ಎಂ. ಪಾಟೀಲ ವೈದ್ಯಕೀಯ ಮಹಾವಿದ್ಯಾಲಯದಲ್ಲಿ ವಾರ್ಷಿಕ ಕ್ರೀಡೋತ್ಸವ–ಜೆನಿತ್ 2026 ನಡೆಯಿತು. ಈ ಕ್ರೀಡಾಕೂಟದಲ್ಲಿ ವಿಜೇಯರ ಕ್ರೀಡಾಪಟುಗಳಿಗೆ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಯೋಗ ಅಧ್ಯಯನ ಕೇಂದ್ರದ ಅಧ್ಯಕ್ಷ ಡಾ. ರಾಜಕುಮಾರ ಪಿ. ಮಾಲಿಪಾಟೀಲ ಬಹುಮಾನ ವಿತರಿಸಿದರು. ಈ ಸಂದರ್ಭದಲ್ಲಿ ಡೀಮ್ಡ್ ವಿವಿ ಸಮಕುಲಾಧಿಪತಿ ಡಾ. ವೈ. ಎಂ. ಜಯರಾಜ, ಕುಲಪತಿ ಡಾ. ಅರುಣ ಚಂ. ಇನಾಮದಾರ, ಕುಲಸಚಿವ ಡಾ. ಆರ್. ವಿ. ಕುಲಕರ್ಣಿ, ಡಾ. ತೇಜಸ್ವಿನಿ ವಲ್ಲಭ, ಎಸ್. ಎಸ್. ಕೋರಿ ಮುಂತಾದವರು ಉಪಸ್ಥಿತರಿದ್ದರು.