ದತ್ತ ಇಂಡಿಯನ್ ಸಕ್ಕರೆಗೆ ಬೆಂಕಿ ಅವಘಡ: ಅಪಾರ ಹಾನಿ
ಚಡಚಣ, ಫೆ.04 : ಚಡಚಣ ದತ್ತ ಇಂಡಿಯನ್ ಸಕ್ಕರೆ ಕಾರ್ಖಾನೆಗೆ ಬುಧವಾರ ಮಧ್ಯಾಹ್ನ ಬೆಂಕಿ ಅವಘಡ ಸಂಭವಿಸಿ, ಅಪಾರ ಮೌಲ್ಯದ ಕೋಟ್ಯಾಂತರ ರೂಪಾಯಿ ಮೌಲ್ಯದ ಹಾನಿಯಾಗಿರುವ ಘಟನೆ ನಡೆದಿದೆ.
ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು, ಬೆಂಕಿ ತೀವ್ರತೆ ಹೆಚ್ಚಾಗುತ್ತಿದ್ದಂತೆ ಸ್ಥಳಕ್ಕೆ ಇಂಡಿ ಅಗ್ನಿಶಾಮಕ ದಳದ ಸಿಬ್ಬಂದಿ ಧಾವಿಸಿ ಬೆಂಕಿ ಸಂಪೂರ್ಣ ನಂದಿಸಿದ್ದಾರೆ ಎಂದು ತಿಳಿದು ಬಂದಿದೆ.
ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಪ್ರಾಥಮಿಕ ತನಿಖೆಯಲ್ಲಿ ಆಕಸ್ಮಿಕ ಬಗೇಜ್ ಬೆಂಕಿ ಹೊತ್ತಿ, ಇಡೀ ಕಾರ್ಖಾನೆಯ ಉಪಕರಣಗಳಿಗೆ ಬೆಂಕಿ ತಗುಲಿರಬಹುದು ಎಂದು ಶಂಕಿಸಲಾಗಿದೆ.
ಈ ಕುರಿತು ಚಡಚಣ ಪೋಲಿಸ್ ಠಾಣೆಯಲ್ಲಿ ಪ್ರಕರಣ ನಡೆದಿದೆ.
ಸ್ಥಳಕ್ಕೆ ತಾಲೂಕು ದಂಡಾಧಿಕಾರಿ ಸಂಜಯ ಇಂಗಳೆ, ಆಹಾರ ನಿರೀಕ್ಷಕ ಶಿವಾನಂದ ಕೋಳಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.