ಇಂಡಿ. ಯಾವುದೇ ಶಿಕ್ಷಣ ಸಂಸ್ಥೆಯ ಪ್ರಗತಿಯಲ್ಲಿ ಆಡಳಿತ ಮಂಡಳಿಯಷ್ಟೇ ಅಲ್ಲ, ಅಲ್ಲಿನ ಶಿಕ್ಷಕರ ಪಾತ್ರ ಅತ್ಯಂತ ಮಹತ್ವದ್ದೆಂಬುದಕ್ಕೆ ಎಚ್. ಎಂ. ಬಿಳ್ವಾರ ಅವರ ಸೇವೆಯೇ ಸಾಕ್ಷಿಯಾಗಿದೆ. ಎಂದು ಶಾಸಕ ಯಶವಂತರಾಯಗೌಡ ಪಾಟೀಲ ಹೇಳಿದರು.
ನಗರದ ಅಂಜುನಮನ್ ಶಿಕ್ಷಣ ಸಂಸ್ಥೆಯ ದೈಹಿಕ ಶಿಕ್ಷಕರಾದ ಹುಮಾಯುನ್ ಬಿಳವಾರ ಅವರ ವಯೋನಿವೃತ್ತಿ ಪ್ರಯುಕ್ತ ಅಂಜುಮನ್ ಸಂಸ್ಥೆಯ ವತಿಯಿಂದ ನೆಡದ ಬೀಳ್ಕೋಡಗೆ ಹಾಗೂ ಸನ್ಮಾನ ಸಮಾರಂಭದ ಉದ್ಘಾಟನೆ ನೆರವೆಸಿ ಮಾತನಾಡಿದ ಅವರು
ಶಿಕ್ಷಣ ಕ್ಷೇತ್ರದ ಜೊತೆಗೆ ಸಾಮಾಜಿಕ ಸೇವೆಯಲ್ಲೂ ಸದಾ ಮುಂಚೂಣಿಯಲ್ಲಿ ನಿಂತು ಕಾರ್ಯನಿರ್ವಹಿಸಿದ ಅಂಜುಮನ್ ಶಿಕ್ಷಣ ಸಂಸ್ಥೆಯ ಹಿರಿಯ ದೈಹಿಕ ಶಿಕ್ಷಣ ಶಿಕ್ಷಕರಾದ ಬಿಲ್ವಾರ್ ಸರ್ಗಳು ತಮ್ಮ ದೀರ್ಘಕಾಲದ ಸೇವೆಯ ಬಳಿಕ ನಿವೃತ್ತಿ ಹೊಂದಿಲಿದ್ದಾರೆ.
ಬಿಳ್ವಾರ ಸರ್ ಶಿಕ್ಷಣದ ಜೊತೆಗೆ ಸಮಾಜಮುಖಿ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದವರು. ನಮ್ಮ ಪ್ರದೇಶದಲ್ಲಿ ನಡೆಯುವ ಸರ್ಕಾರಿ ಅಥವಾ ಅರೆ ಸರಕಾರಿ ಕಾರ್ಯಕ್ರಮಗಳಾಗಲಿ —ಎಲ್ಲೆಡೆ ಅವರು ಮುಂಚೂಣಿಯಲ್ಲಿ ಕಾಣಿಸಿಕೊಂಡು, ಶಿಸ್ತಿನೊಂದಿಗೆ ಸೇವೆ ಸಲ್ಲಿಸುತ್ತಿದ್ದರು.
ವಿಶೇಷವಾಗಿ ದೈಹಿಕ ಶಿಕ್ಷಣ ಶಿಕ್ಷಕರಾದವರು ವಿದ್ಯಾರ್ಥಿಗಳೊಂದಿಗೆ ಕೇವಲ ಗುರು–ಶಿಷ್ಯರ ಸಂಬಂಧವಲ್ಲದೆ, ಸ್ನೇಹಪೂರ್ಣ ಸಂಬಂಧವನ್ನು ಬೆಳೆಸಿಕೊಂಡು ಮಕ್ಕಳ ವ್ಯಕ್ತಿತ್ವ ನಿರ್ಮಾಣದಲ್ಲಿ ಮಹತ್ವದ ಪಾತ್ರ ವಹಿಸಿದ್ದರು. ಸಂಸ್ಥೆಯಲ್ಲಿ ಕಾರ್ಯನಿರ್ವಹಿಸಿ ನಿವೃತ್ತಿ ಹೊಂದುವ ಶಿಕ್ಷಕರನ್ನು ಗೌರವಿಸುವುದು ನಮ್ಮೆಲ್ಲರ ಕರ್ತವ್ಯವಾಗಿದೆ.
ಬಿಲ್ವಾರ್ ಸರ್ಗಳ ನಿವೃತ್ತಿ ಜೀವನ ಸುಖ–ಶಾಂತಿಯುತವಾಗಿರಲಿ, ಅಲ್ಲಾಹ್ ಅವರಿಗೆ ನೂರು ವರ್ಷಗಳ ಆಯುಷ್ಯ ದಯಪಾಲಿಸಲಿ ಹಾಗೂ ಮುಂದುವರಿದು ಸಮಾಜ ಸೇವೆ ಮಾಡಲು ಶಕ್ತಿ ನೀಡಲಿ ಎಂದು ಈ ಸಂದರ್ಭದಲ್ಲಿ ಹಾರೈಸಲಾಯಿತು.
ಅಂಜುಮನ್ ಶಿಕ್ಷಣ ಸಂಸ್ಥೆಯನ್ನು ಕಟ್ಟುವಲ್ಲಿ ಅನೇಕ ಹಿರಿಯರ ತ್ಯಾಗ ಮತ್ತು ಪರಿಶ್ರಮ ಅಡಗಿದೆ. ಸಂಸ್ಥೆ ಸ್ಥಾಪನೆಯ ಆರಂಭಿಕ ದಿನಗಳಲ್ಲಿ ಕೆಲಸ ಮಾಡಿದವರಿಗೆ ಮಾತ್ರ, ಒಂದು ಶಿಕ್ಷಣ ಸಂಸ್ಥೆಯನ್ನು ಕಟ್ಟಲು ಎಷ್ಟು ಶ್ರಮ ಬೇಕು ಎಂಬುದು ತಿಳಿದಿರುತ್ತದೆ. ಅಂತಹ ಹಿರಿಯರನ್ನು ಪ್ರತಿಯೊಂದು ಸಂದರ್ಭದಲ್ಲಿ ಸ್ಮರಿಸುವುದು ನಮ್ಮ ಕರ್ತವ್ಯವಾಗಿದೆ ಎಂದರು
ಅಂಜುಮನ್ ಶಿಕ್ಷಣ ಸಂಸ್ಥೆಯು ಇದುವರೆಗೆ ಸಾವಿರಾರು ವಿದ್ಯಾರ್ಥಿಗಳಿಗೆ ಭವಿಷ್ಯ ನೀಡಿದ್ದು, ಇಲ್ಲಿ ಶಿಕ್ಷಣ ಪಡೆದ ಅನೇಕರು ಇಂದು ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಇದು ಸಂಸ್ಥೆಗೆ ಹೆಮ್ಮೆಯ ವಿಷಯವಾಗಿದೆ.
ಈ ಸಂದರ್ಭದಲ್ಲಿ ಸರ್ಕಾರಿ ಹಾಗೂ ಖಾಸಗಿ ಶಾಲೆಗಳ ಎಸ್ಎಸ್ಎಲ್ಸಿ ವಿದ್ಯಾರ್ಥಿಗಳಿಗೆ ವಿಶೇಷವಾಗಿ ಮನವಿ ಮಾಡಲಾಗಿದ್ದು, ಉತ್ತಮವಾಗಿ ಅಧ್ಯಯನ ಮಾಡಿ ಜಿಲ್ಲೆ ಹಾಗೂ ತಾಲ್ಲೂಕಿನ ಹೆಸರನ್ನು ರಾಜ್ಯಮಟ್ಟದಲ್ಲಿ ಉನ್ನತಿಗೆ ತರುವಂತೆ ಕರೆ ನೀಡಲಾಯಿತು. ಕಳೆದ ಬಾರಿ ವಿಜಯಪುರ ಜಿಲ್ಲೆ ರಾಜ್ಯದಲ್ಲಿ ಎರಡನೇ ಕೊನೆಯ ಸ್ಥಾನದಲ್ಲಿದ್ದರೂ, ಈ ಬಾರಿ ಪ್ರಥಮ ಸ್ಥಾನ ಪಡೆಯಲಿ ಎಂಬ ಮನವಿ ಮಾಡಿದರು
ಸನ್ಮಾನ ಸ್ವೀಕರಿಸಿ ಮಾತನಾಡಿದ ಎಚ್.ಎಂ. ಬಿಳ್ವಾರ್ ಅವರು, ಶಾಲೆಯ ಶಿಕ್ಷಕರು, ಗ್ರಾಮಸ್ಥರು ಹಾಗೂ ಪಾಲಕರಿಗೆ ಹೃತ್ಪೂರ್ವಕ ಕೃತಜ್ಞತೆಗಳನ್ನು ಸಲ್ಲಿಸಿದರು. “ನೀವು ಎಲ್ಲರೂ ನನಗೆ ಅಪಾರ ಪ್ರೀತಿ ಮತ್ತು ಗೌರವ ನೀಡಿದ್ದೀರಿ. ನನ್ನ ಜೀವನದ ಪ್ರತಿಯೊಂದು ಹಂತದಲ್ಲೂ ನೀವು ನನಗೆ ಬೆಂಬಲವಾಗಿ ನಿಂತಿದ್ದೀರಿ. ಇದನ್ನು ನಾನು ಎಂದಿಗೂ ಮರೆಯಲಾರೆ,” ಎಂದು ಅವರು ಭಾವನಾತ್ಮಕವಾಗಿ ಹೇಳಿದರು.
ಶಾಲೆಯ ಅಭಿವೃದ್ಧಿಗೆ ತಾವು ಕೈಗೊಂಡ ಎಲ್ಲ ಕಾರ್ಯಗಳಲ್ಲಿ ಆಡಳಿತ ಮಂಡಳಿ, ಸಹ ಶಿಕ್ಷಕರ, ಹಾಗೂ ಪಾಲಕರ ಸಹಕಾರ ಅತ್ಯಂತ ಮಹತ್ವದ್ದಾಗಿತ್ತು ಎಂದು ಅವರು ಸ್ಮರಿಸಿದರು. ಸಮಾಜದಲ್ಲಿ ಸಕಾರಾತ್ಮಕ ಬದಲಾವಣೆ ತರಲು ಹಾಗೂ ಒಂದು ಶಿಕ್ಷಣ ಸಂಸ್ಥೆ ಬೆಳೆಯಬೇಕು ಎಂದರೆ ಉತ್ತಮ ಆಡಳಿತ ಮಂಡಳಿ, ಶ್ರದ್ಧೆಯುಳ್ಳ ಹಾಗೂ ನಿಷ್ಠಾವಂತ ಶಿಕ್ಷಕರು ಮತ್ತು ಶಿಕ್ಷಕರ ಮೇಲೆ ನಂಬಿಕೆ ಇಡುವ ಪಾಲಕರು ಅಗತ್ಯವೆಂದು ಅವರು ಅಭಿಪ್ರಾಯಪಟ್ಟರು.
“ಸಮಾಜದ ಹಿತಕ್ಕಾಗಿ ನಾನು ಮಾಡಿದ ಪ್ರತಿಯೊಂದು ಕೆಲಸವೂ ನನ್ನ ಕರ್ತವ್ಯವೆಂದು ಭಾವಿಸಿ ಮಾಡಿದದ್ದಾಗಿದೆ. ಈ ಎಲ್ಲ ಸಾಧನೆಗಳಿಗೆ ನಿಮ್ಮ ಬೆಂಬಲ ಮತ್ತು ಸಹಕಾರವೇ ನನ್ನ ಶಕ್ತಿಯಾಗಿದೆ,” ಎಂದು ಎಚ್.ಎಂ. ಬಿಳ್ವಾರ ಅವರು ಹೇಳಿದರು
ಈ ಸಂದರ್ಭದಲ್ಲಿ ಮೌಲಾನಾ ಶಾಕೀರ ಹುಸೇನ ಕಾಸ್ನಿ ಸಾನಿಧ್ಯ ವಹಿಸಿದರು. ಲಿಂಬೆ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಬೀಮಣ್ಣ ಕವಲಗಿ, ಜಿಲ್ಲಾ ಗ್ಯಾರಂಟಿ ಯೋಜನೆಯ ಅಧ್ಯಕ್ಷ ಇಲಿಯಾಸ ಬೋರಾಮಣಿ, ಕ್ಷೇತ್ರ ಶಿಕ್ಷಣಾಧಿಕಾರಿ ಶ್ರೀಮತಿ ಅನೀಸ ಪಾತೀಮಾ ಮುಜಾವರ, ಖ್ಯಾತ ಉದ್ಯಮಿ ಜಗದೀಶ್ ಕ್ಷೇತ್ರಿ, ಫಾರೂಕ ತುರ್ಕಿ, ಇದ್ದರು.
ಪ್ರಾಸ್ತಾವಿಕವಾಗಿ ಶಾಲೆಯ ಮುಖ್ಯೋಪಾಧ್ಯಾಯ ಮುಜಿಬ ಬಾಗವಾನ, ಮಾತನಾಡಿದರು.