ಅಂಬಿಗರ ಚೌಡಯ್ಯನವರ ಚಿಂತನೆಗಳು ಪ್ರಸ್ತುತ ಸಮಾಜಕ್ಕೆ ಅಮೂಲ್ಯ-ಸಂತೋಷ ಬಂಡೆ
ಇಂಡಿ: ಮೂಢನಂಬಿಕೆಗಳ ವಿರುದ್ಧ ತಮ್ಮ ವಚನಗಳ ಮೂಲಕ ಧ್ವನಿ ಎತ್ತಿದ ಅಂಬಿಗರ ಚೌಡಯ್ಯನವರ ಚಿಂತನೆಗಳು ಪ್ರಸ್ತುತ ಸಮಾಜಕ್ಕೆ ಅಮೂಲ್ಯವಾಗಿವೆ ಎಂದು ಶಿಕ್ಷಕ ಸಂತೋಷ ಬಂಡೆ ಹೇಳಿದರು.
ಬುಧವಾರದಂದು ತಾಲೂಕಿನ ಯುಬಿಎಸ್ ಶಾಲೆಯಲ್ಲಿ ಹಮ್ಮಿಕೊಂಡ ಅಂಬಿಗರ ಚೌಡಯ್ಯನವರ ಜಯಂತಿ ಆಚರಣೆಯನ್ನು ಉದ್ಧೇಶಿಸಿ ಅವರು ಮಾತನಾಡಿದರು.
‘ಸಮಾಜದ ಕಂದಾಚಾರ-ಅಸಮಾನತೆ, ಬಡವ-ಶ್ರೀಮಂತ ಎಂಬ ಭೇದಭಾವಗಳ ಮಧ್ಯೆ ಸರ್ವರಿಗೂ ಸಮಬಾಳು ಸರ್ವರಿಗೂ ಸಮಪಾಲು ಎಂಬ ವಿಚಾರ ಮೌಲ್ಯಗಳನ್ನು ತಮ್ಮ ವಚನಗಳಲ್ಲಿ ಸಾರಿದ ಅಂಬಿಗರ ಚೌಡಯ್ಯನವರ ಸಂದೇಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು’ ಎಂದು ಹೇಳಿದರು.
ಅಧ್ಯಕ್ಷತೆ ವಹಿಸಿದ್ದ ಮುಖ್ಯ ಶಿಕ್ಷಕ ಕೆ ಆಯ್ ಮಕಾನದಾರ ಮಾತನಾಡಿ, ಅಂಬಿಗರ ಚೌಡಯ್ಯನವರು ಜಾತ್ಯತೀತ,ಧರ್ಮಾತೀತ ಸಮಾಜ ನಿರ್ಮಾಣದ ಆಶಯ ಹೊಂದಿದ್ದರು.ಅವರು ತನ್ನ ವಚನಗಳ ಮೂಲಕ ಜಾಗೃತಿ ಮೂಡಿಸಿ ಇಡೀ ವಿಶ್ವಕ್ಕೆ ಮಾದರಿಯಾಗಿದ್ದಾರೆ. 21ನೇ ಶತಮಾನಕ್ಕೂ ಅವರ ಮೌಲ್ಯಗಳು ದಾರಿದೀಪವಾಗಿವೆ ಎಂದು ಹೇಳಿದರು.
ಶಿಕ್ಷಕರಾದ ಎಸ್ ಎಸ್ ಅರಬ, ಎನ್ ಬಿ ಚೌಧರಿ, ಎಸ್ ಪಿ ಪೂಜಾರಿ, ಅತಿಥಿ ಶಿಕ್ಷಕಿ ಅಲ್ಫಿಯಾ ಅಂಗಡಿ, ಡಿ ಎಡ್ ಪ್ರಶಿಕ್ಷಣಾರ್ಥಿಗಳಾದ ಮುಸ್ಕಾನ ಮಂಕಣಿ, ಸಾನಿಯಾ ಪಠಾಣ, ಜುಬಿಯಾ ಬಾಗವಾನ ಸೇರಿದಂತೆ ಮಕ್ಕಳು ಭಾಗವಹಿಸಿದ್ದರು.
1 thought on “ಅಂಬಿಗರ ಚೌಡಯ್ಯನವರ ಚಿಂತನೆಗಳು ಪ್ರಸ್ತುತ ಸಮಾಜಕ್ಕೆ ಅಮೂಲ್ಯ-ಸಂತೋಷ ಬಂಡೆ”